ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು Saaksha Tv
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆಯಿಂದ ಮೇಕೆದಾಟು ಪಾದಯಾತ್ರೆ ಪ್ರಾರಂಭವಾಗಿತ್ತು. ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದ್ದರು, ಪಾದಯಾತ್ರೆ ಮಾಡಿದ್ದರಿಂದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೇರಿ 30 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋವಿಡ್ ಸೋಂಕು ನಿಯಂತ್ರಣದ ಉದ್ದೇಶದಿಂದ ಸರಕಾರ ವೀಕೆಂಡ್ ಕರ್ಪ್ಯು ನಿಯಮ ಜಾರಿ ಮಾಡಿತ್ತು. ನಿಯಮದಡಿ ರಾಜ್ಯದಲ್ಲಿ ಎಲ್ಲ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿದೆ. ಹೀಗಿದ್ದರೂ ವೀಕೆಂಡ್ ಕರ್ಫ್ಯೂ ವೇಳೆ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದರು. ಈ ಕಾರಣದಿಂದ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾನ್ಯ ಜನರು ರಸ್ತೆಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪಾದಯಾತ್ರೆ ಮಾಡುತ್ತಿದ್ದು, ಅವರ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಜನರು ರಾಜ್ಯ ಸರಕಾರವನ್ನು ಪ್ರಶ್ನಿಸುತ್ತಿದ್ದರು.