ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಹೋಟೆಲ್ ಸಪ್ಲೈಯರ್ Saaksha Tv
ಶಿವಮೊಗ್ಗ: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ ಹೋಟೆಲ್ ಸಪ್ಲೈಯರ್ ಅತ್ಯಾಚಾರವೆಸಗಿದ್ದಾನೆ. ಈ ಘಟನೆಯು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಈ ವಿಚಾರವನ್ನು ಹೊರಗೆ ತಿಳಿಸಿದರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ.
ಅತ್ಯಾಚಾರವೆಸಗಿರುವ ಆರೋಪಿ ಉಮೇಶ್ (28) ಆಗಿದ್ದು, ಈತನು ಭದ್ರಾವತಿ ಪಟ್ಟಣ ಸಮೀಪದ ಗ್ರಾಮವೊಂದರ ಹೋಟೆಲ್‌ನ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದನು. ಇದೇ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮಗಳು ಆಗಾಗ ಹೋಟೆಲ್‌ಗೆ ಬಂದು ಹೋಗುತ್ತಿದ್ದಳು. ಆಕೆಯನ್ನು ಪರಿಚಯಿಸಿಡಿಕೊಂಡಿದ್ದ ಉಮೇಶ್ ಸೋಮವಾರ ಬೆಳಗ್ಗೆ ಅಪ್ರಾಪ್ತ ವಿದ್ಯಾರ್ಥಿನಿಯು ಶಾಲೆಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಪುಸಲಾಯಿಸಿ, ಭದ್ರಾವತಿಯಿಂದ ಬಸ್ಸಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಗೆ ಕರೆದುಕೊಂಡು ಹೋಗಿದ್ದಾನೆ.
ಅಲ್ಲಿ ಲಾಡ್ಜ್ ಒಂದರಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಈ ವಿಚಾರ ಹೊರಗೆ ಗೊತ್ತಾದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ, ಈ ಘಟನೆ ಸಂಬಂಧ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.