ಧಾರವಾಡ, ಮೇ 26 : ಇಂದು ಗಾಂಧಿನಗರದ ಓಂ ನಗರದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. 34 ವರ್ಷದ ಮಾವಿನ ಹಣ್ಣಿನ ವ್ಯಾಪಾರ ಮಾಡುವ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು ಮಹಾರಾಷ್ಟ್ರದ ಮುಂಬೈ ಹಾಗೂ ಇತರೆಡೆ ಸಂಚರಿಸಿರುವ ಹಿನ್ನೆಲೆ ಹೊಂದಿದ್ದಾರೆ. ಈ ಪ್ರಕರಣ ರಾಜ್ಯದಲ್ಲಿ ಪತ್ತೆಯಾದ 1060 ನೇ ಪ್ರಕರಣವಾಗಿರುವುದರಿಂದ ಪಿ-1060 ಎಂದು ಈ ಕೊರೊನಾ ಸೋಂಕಿತರನ್ನು ಗುರುತಿಸಲಾಗಿದೆ.
ಮುಂಬಯಿ ಮಾರುಕಟ್ಟೆಗೆ ಭೇಟಿ ನೀಡಿ ಬಂದಿದ್ದ ಇವರು ನಂತರ ಜಿಲ್ಲೆಯ ಅನೇಕ ಮಾವಿನ ತೋಟಗಳಿಗೆ ಭೇಟಿ ಕೊಟ್ಟಿದ್ದಾರೆ. ಜಿಲ್ಲಾಡಳಿತ ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರೆಲ್ಲರಿಗೂ ಕ್ವಾರಂಟೈನ್ ಗೆ ಒಳಗಾಗಲು ಮನವಿ ಮಾಡಿದೆ. ಜಿಲ್ಲೆಯಲ್ಲಿ ಇದುವರೆಗೆ 22 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








