ಹೆತ್ತ ತಾಯಿಯ ಮೇಲೆ ಅತ್ಯಾರವೆಸಗಿದ ಮಗ Saaksha Tv
ಪುತ್ತೂರು: ಹೆತ್ತ ತಾಯಿಯ ಮೇಲೆ ಮಗನೇ ಅತ್ಯಾಚಾರ ಮಾಡಿದ್ದಾನೆ. ಘಟನೆಯು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರ ಎಂಬಲ್ಲಿ ನಡೆದಿದೆ.
35 ವರ್ಷದ ಜಯರಾಮ ರೈ ಆರೋಪಿಯಾಗಿದ್ದಾನೆ, ಈತ ತನ್ನ 58 ವರ್ಷದ ತಾಯಿ ಜೊತೆ ಒಂದೇ ಮನೆಯಲ್ಲಿ ವಾಸವಾಗಿದ್ದ. ಜನವರಿ 12ರಂದು 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದಾಗ, ಕೋಣೆಗೆ ತೆರಳಿ ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭದಲ್ಲಿ ತಾಯಿ ಕಿರುಚಿ, ತೀವ್ರ ವಿರೋಧ ವ್ಯಕ್ತಪಡಿಸಿದಾಗ, ಆರೋಪಿಯು ತಾಯಿಯ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ. ಅತ್ಯಾಚಾರದ ಬಳಿಕ ವಿಚಾರವನ್ನು ಹೊರಗಡೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಮರುದಿನ ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಯು ಬಲವಂತದಿಂದ ಆಕೆಯನ್ನು ಮನೆಯ ಹಾಲ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದು, ಮಗನ ಕೃತ್ಯದಿಂದ ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾಳೆ. ನಂತರ ಸಂತ್ರಸ್ತೆ ಸಂಪ್ಯ ಠಾಣೆಗೆ ದೂರು ನೀಡಿದ್ದು ಆರೋಪಿಯ ಮೇಲೆ ಐಪಿಸಿ ಸೆಕ್ಷನ್ 376(2) (ಎನ್) ಮತ್ತು 506 ಸೆಕ್ಷನ್ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸಧ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.








