COVID 19 CASES UPDATE | ಇಂದು ದೇಶದಲ್ಲಿ 2.68 ಲಕ್ಷ ಕೇಸ್ ಪತ್ತೆ covid cases in india
ನವದೆಹಲಿ : ದೇಶದಲ್ಲಿ ಕೊರೊನಾ ಮೂರನೇ ಅಲೆಯ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,68,833 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 402 ಮಂದಿ ಸೋಂಕಿತರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ನಿನ್ನೆ 1,22,684 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿನ್ನೂ 14,17,820 ಸಕ್ರಿಯ ಪ್ರಕರಣಗಳಿವೆ. ಈವರೆಗೆ ದೇಶದಲ್ಲಿ ಸುಮಾರು 4,85,752 ಮಂದಿ ಹೆಮ್ಮಾರಿಗೆ ಪ್ರಾಣತೆತ್ತಿದ್ದಾರೆ.
ದೇಶದಲ್ಲಿ ಈವರೆಗೆ 6,041 ಮಂದಿಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.









