ಮಂಗಳೂರು, ಮೇ 17 : ದಕ್ಷಿಣ ಕನ್ನಡದಲ್ಲಿ ವಲಸೆ ಕಾರ್ಮಿಕರು ಮತ್ತು ಅನಿವಾಸಿ ಕನ್ನಡಿಗರು ಲಾಕ್ ಡೌನ್ ನಿಂದಾಗಿ ತೊಂದರೆ ಅನುಭವಿಸಲು ಚುನಾಯಿತ ಜನಪ್ರತಿನಿಧಿಗಳು ಕಾರಣ. ಅಧಿಕಾರಿಗಳ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡಿ ಅವರ ಕೈಕಟ್ಟಿರುವುದರಿಂದಲೇ ಜಿಲ್ಲೆಯಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯಲ್ಲಿ ಅನಿವಾಸಿ ಕನ್ನಡಿಗರ, ವಲಸೆ ಕಾರ್ಮಿಕರ ಕೊಡುಗೆ ಬಹಳವಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅವರೆಲ್ಲರನ್ನೂ ಕೇವಲವಾಗಿ ಕಾಣಲಾಗುತ್ತಿದೆ. ಕಾಂಗ್ರೆಸ್ ನಾಯಕರು ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಸಾಂತ್ವನ ಹೇಳಲು ಹೋದರೆ, ಕಾಂಗ್ರೆಸ್ ಸೋಂಕು ಹರಡಿಸುತ್ತಿದೆ ಎಂದು ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ನಿಯಂತ್ರಿಸುವ ಜವಾಬ್ದಾರಿ ಆಡಳಿತ ಪಕ್ಷ ತೋರಬೇಕಿತ್ತು ಎಂದು ಕಿಡಿಕಾರಿದರು.
ಕೇರಳ ರಾಜ್ಯದಲ್ಲಿ ಕಾರ್ಮಿಕರು ಸೇರಿದಂತೆ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಂಚಾಯತ್ ಗಳಲ್ಲಿ ಗಂಜಿ ಕೇಂದ್ರ ತೆರೆದಿದ್ದಾರೆ.ಆದರೆ ನಮ್ಮ ರಾಜ್ಯದಲ್ಲಿ ಅಂತಹ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!
ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...








