ಬೆಂಗಳೂರು, ಮೇ 17 : ಕೊರೋನಾ ಸೋಂಕಿನಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ದೇಶಕ್ಕೆ ಕೇಂದ್ರ ಸರಕಾರ ನೆರವಾಗಿದೆ. ಸ್ವಾವಲಂಬಿ ಭಾರತವನ್ನಾಗಿಸಲು ಕೇಂದ್ರ ಸರ್ಕಾರ ಘೋಷಿಸಿರುವ ಪರಿಹಾರದ ಕ್ರಮಗಳಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೇಶದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರದ ಹಲವಾರು ಯೋಜನೆಗಳು ಮತ್ತು ಹಣಕಾಸು ಸಹಾಯ ರಾಜ್ಯಕ್ಕೆ ನೆರವಾಗಲಿದೆ ಎಂದರು. ರಾಜ್ಯದಲ್ಲಿ ಹಲವಾರು ಖನಿಜ ನಿಕ್ಷೇಪಗಳಿದ್ದು, ಅವುಗಳ ಗಣಿಗಾರಿಕೆ ಮಾಡಲು ಖಾಸಗಿ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದ ಯಡಿಯೂರಪ್ಪ ಖನಿಜ ಸಂಬಂಧಿಸಿದ ಕಾಯ್ದೆ ಇದಕ್ಕೆ ಸಹಕಾರಿಯಾಗಲಿದೆ. ಗಣಿಗಾರಿಕೆ ಅವಕಾಶಗಳ ನಿರ್ಬಂಧಗಳು ಸಡಿಲಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲಿದೆ. ಇದರಿಂದ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...








