ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ : 6406 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗುಡ್ ನ್ಯೂಸ್ ನೀಡಿದೆ.
ಇಲಾಖೆಯಲ್ಲಿ ಖಾಲಿ ಇರುವ ವಿವಿಧ 6406 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827 ಸೆಕೆಂಡ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ – 2579 ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.
ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಅಧಿಕೃತ ವೆಬ್ಸೈಟ್ rdpr.karnataka.gov.in ವೀಕ್ಷಿಸಬಹುದಾಗಿದೆ.









