ಶನಿವಾರ ಯಾವುದೇ ಪಾಸಿಟಿವ್ ಪ್ರಕರಣಗಳು ಇರದೆ ನೆಮ್ಮದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಪತ್ತೆಯಾಗಿರುವ ಪ್ರಕರಣಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 2 ಮತ್ತು ಉಡುಪಿ ಜಿಲ್ಲೆಯ ಒಬ್ಬರು ಸೇರಿದ್ದಾರೆ. ಉಡುಪಿ ಜಿಲ್ಲೆಯ 54 ವರ್ಷದ ಪುರುಷ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಇವರು ಮುಂಬೈನಿಂದ ಬಂದಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ 31 ವರ್ಷದ ಪುರುಷನ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ. ಇನ್ನೊಬ್ಬ 35 ವರ್ಷದ ಮಹಿಳೆ ಮುಂಬೈನಿಂದ ಆಗಮಿಸಿದ್ದು, ಅವರಿಗೆ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ 54 ವರ್ಷದ ಪುರುಷ ಹೃದಯ ಸಂಬಂಧಿ ತೊಂದರೆಯಿಂದ ಖಾಸಗಿ ಆಸ್ಪತ್ರೆಯಿಂದ ದಾಖಲಾಗಿದ್ದು, ಮೇ.14ರಂದು ಹೃದಯಾಘಾತದಿಂದ ಮೃತರಾಗಿದ್ದಾರೆ. ಮೇ.16ರಂದು ಇವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು.








