ಸಚಿವ ಕತ್ತಿ ಅವರಿಂದ ಉಡಾಫೆ ಮಾತು Saaksha Tv
ಅಥಣಿ: ಕೊರೊನಾ ನಿಯಂತ್ರಸಲು ರಾಜ್ಯ ಬಿಜೆಪಿ ಸರಕಾರ ಹಲವು ಕಠಿಣ ನಿಯಮ ಜಾರಿಗೊಳಿಸದೆ. ಆದರೆ ಇವರದೇ ಪಕ್ಷದ ಸಚಿವರೊಬ್ಬರು ಉಡಾಫೆಯಾಗಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್ ಧರಿಸುವುದು ಅಥವಾ ಬಿಡುವುದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ. ಹಾಗಾಗಿ ನಾನು ಮಾಸ್ಕ್ ಧರಿಸಿಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವರಾದ ಉಮೇಶ ಕತ್ತಿ ಹೇಳಿದರು.
ಪಟ್ಟಣದಲ್ಲಿ ಲಕ್ಷ್ಮಿ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೊರೊನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡದೆ. ಕಳೆದ ಎರಡು ದಿನದ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾಸ್ಕ್ ಧರಿಸುವುದು, ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಅದಕ್ಕೆ ನಾನು ಮಾಸ್ಕ್ ಧರಿಸುತಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.








