ಆಟವಾಡುವಾಗ ಚರಂಡಿಗೆ ಬಿದ್ದ ಅಕ್ಕ – ತಮ್ಮ ಸಾವು
ಅಕ್ಕ ತಮ್ಮ ಇಬ್ಬರೂ ಆಟವಾಡುವಾಗ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವಂತಹ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.. 9 ವರ್ಷದ ರುಬೀನಾ ಹಾಗೂ 10 ತಿಂಗಳ ಮಗು ಸುಮಿತ್ ಕುಮಾರ್ ಮೃತ ಮಕ್ಕಳಾಗಿದ್ದಾರೆ..
ಇಬ್ಬರು ಆಟವಾಡುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದಿದ್ದಾರೆ. ಚರಂಡಿ ಸುಮಾರು 15 ಅಡಿ ಆಳವಿದ್ದುದರಿಂದ ಮಕ್ಕಳಿಬ್ಬರು ಸಾವನ್ನಪಿದ್ದಾರೆ.
ಬಿಹಾರದ ಸಮಸ್ತಿಪುರದ ನಿವಾಸಿ ಶಂಭು ಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಕೊಳಗೇರಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಸಂಜೆ 4:30ಕ್ಕೆ ಹಿರಿಯ ಮಗಳು ರುಬೀನಾ, ಸುಮಿತ್ ಕುಮಾರ್ ನ ಕರೆದುಕೊಂಡು ಮನೆ ಬಳಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರೂ ಅನುಮಾನಾಸ್ಪದವಾಗಿ ಚರಂಡಿಗೆ ಬಿದ್ದಿದ್ದಾರೆ.
ಮಕ್ಕಳಿಬ್ಬರು ಎಷ್ಟು ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಅವರನ್ನು ಹುಡುಕತೊಡಗಿದಾಗ ಸುಮಾರು ಅರ್ಧ ಗಂಟೆಯ ನಂತರ ರುಬೀನಾ ಮತ್ತು ಅವಳ ಸಹೋದರ ಚರಂಡಿಯಲ್ಲಿ ಕಂಡು ಬಂದಿದೆ. ಚರಂಡಿಯಿಂದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದೆ. ಆದರೆ ಅಷ್ಟರಲ್ಲಾಗಲೇ ಇಬ್ಬರೂ ಮೃತಪಟ್ಟಿದ್ದರು ಎನ್ನಲಾಗಿದೆ..








