ಹೊಸದಿಲ್ಲಿ, ಮೇ 17 : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,987 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ 90,000 ದಾಟಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 120 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ 2,872 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಭಾರತದಲ್ಲಿ ಒಟ್ಟು 90,927 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 34,000 ಅಧಿಕ ಜನರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ಗುಜರಾತ್ ರಾಜ್ಯಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...








