ತೆಲಂಗಾಣ ಗಡಿಯಲ್ಲಿ ಎನ್ಕೌಂಟರ್ – 5 ಮಾವೋವಾದಿಗಳ ಹತ್ಯೆ…
ಮಂಗಳವಾರ ಬೆಳಗ್ಗೆ ತೆಲಂಗಾಣ ಮತ್ತು ಛತ್ತೀಸ್‌ಗಢದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಮಾವೋವಾದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣದಲ್ಲಿ, ಮುಲುಗು ಜಿಲ್ಲೆಯ ಪೆನುಗೋಲು ಗ್ರಾಮದ ಸಮೀಪವಿರುವ ಕರ್ರೆಗುಟ್ಟ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ,
ಮುಲುಗು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಯ ಪ್ರಕಾರ, ಗ್ರೇಹೌಂಡ್ಸ್, ಬಿಜಾಪುರದ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಂಡಗಳೊಂದಿಗೆ ತೆಲಂಗಾಣ ಮತ್ತು ಛತ್ತೀಸ್‌ಗಢದ ಗಡಿಯಲ್ಲಿರುವ ಪೇರೂರು, ಇಲ್ಮಿಡಿ ಮತ್ತು ಉಸುರ್ ಅರಣ್ಯ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೆಂಕಟಾಪುರಂನ ವಿಭಾಗೀಯ ಸಮಿತಿ ಸದಸ್ಯರಾದ ಹಿರಿಯ ಮಾವೋವಾದಿ ನಾಯಕ ಸುಧಾಕರ್ ಸೇರಿದಂತೆ ಸುಮಾರು 40-50 ಶಸ್ತ್ರಸಜ್ಜಿತ ಮಾವೋವಾದಿಗಳು ಈ ಪ್ರದೇಶದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ.
ಎನ್‌ಕೌಂಟರ್ ನಡೆದಿರುವ ಕುರಿತು ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಬಸ್ತರ್ ರೇಂಜ್) ಸುಂದರರಾಜ್ ಪಿ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಖಚಿತಪಡಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ತೆಲಂಗಾಣ ಗ್ರೇಹೌಂಡ್ಸ್‌ಗೆ ಸೇರಿದ ಯೋಧ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ವಾರಂಗಲ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ. ಸದ್ಯ ಘಟನಾ ಸ್ಥಳದ ಸುತ್ತಮುತ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ,” ಎಂದು ಹೇಳಿದರು.








