ವೆಲ್ಲಿಂಗ್ಟನ್, ಮೇ 17 : ನ್ಯೂಜಿಲೆಂಡ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಫೆಯೊಂದು ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಆರ್ಡೆರ್ನ್ ಅವರಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ.
ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಆರ್ಡೆರ್ನ್ ಶನಿವಾರ ತನ್ನ ಕುಟುಂಬದೊಂದಿಗೆ ಕೆಫೆಯೊಂದಕ್ಕೆ ಹೋಗಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಫೆ ಭರ್ತಿಯಾಗಿದ್ದ ಕಾರಣ ಅವರಿಗೆ ಪ್ರವೇಶ ನಿರಾಕರಿಸಲಾಯಿತು ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಜೆಸಿಂಡಾ ಆರ್ಡೆರ್ನ್ ಅವರ ಸಂಗಾತಿ ಕ್ಲರ್ಕ್ ಗೇಫೋರ್ಡ್, ಇದು ನನ್ನಿಂದ ಆಗಿರುವ ತಪ್ಪು. ಕೆಫೆಯಲ್ಲಿ ಕುಟುಂಬದೊಂದಿಗೆ ಊಟ ಮಾಡಲು ಸ್ಥಳವನ್ನು ಕಾಯ್ದಿರಿಸಿರಲಿಲ್ಲ. ಆದರೆ ನಾವು ವಾಪಾಸು ಹೋಗುವಾಗ ಕೆಫೆಯಲ್ಲಿದ್ದ ಓರ್ವ ವ್ಯಕ್ತಿ ಸ್ಥಳವಕಾಶ ಮಾಡಿಕೊಟ್ಟು ಊಟ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ನ್ಯೂಜಿಲೆಂಡ್ ನಲ್ಲಿ ಇದುವರೆಗೆ 1500 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 1433 ಮಂದಿ ಗುಣಮುಖರಾಗಿದ್ದಾರೆ. 21 ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ನಿಯಂತ್ರಣಕ್ಕೆ ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಆರ್ಡೆರ್ನ್ ತೆಗೆದುಕೊಂಡಿರುವ ಕ್ರಮಗಳಿಗೆ ವಿಶ್ವದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...








