ಪಾಕ್ ಲಾಹೋರ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಪೋಟ – ನಾಲ್ವರ ಸಾವು
ಪಾಕಿಸ್ತಾನದ ಲಾಹೋರ್‌ನಲ್ಲಿರುವ ಐತಿಹಾಸಿಕ ಮತ್ತು ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯಲ್ಲಿ ಗುರುವಾರ ಮಧ್ಯಾಹ್ನ ಬಾಂಬ್ ಸ್ಫೋಟಗೊಂಡಿದ್ದು, ನಾಲ್ವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಾರುಕಟ್ಟೆಯು ತುಂಬಾ ಜನದಟ್ಟಣೆಯಿಂದ ಕೂಡಿತ್ತು, ಇಲ್ಲಿ ಪಾರ್ಕಿಂಗ್ ಸೌಲಭ್ಯವಿಲ್ಲದಿದರೂ ವಾಹನ ದಟ್ಟಣೆಯ ನಡುವೆಯೇ ಬೈಕ್ ನಿಲ್ಲಿಸಲಾಗಿತ್ತು ಈ ಬೈಕ್ ನಲ್ಲಿ ಐಇಡಿ ಬಾಂಬ್ ಅಳವಡಿಸಲಾಗಿತ್ತು.
ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ‘ಡಾನ್ ನ್ಯೂಸ್’ಗೆ ತಿಳಿಸಿರುವ ಪ್ರಕಾರ ಗುರುವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಆಗ ಇಲ್ಲಿನ ಅನಾರ್ಕಲಿ ಮಾರುಕಟ್ಟೆಯಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಪೊಲೀಸರು ಸಾವಿನ ಸಂಖ್ಯೆ 3 ಎಂದು ಹೇಳಿದರೆ, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರ ಸ್ಥಿತಿ ಚಿಂತಾಜನಕವಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನಿಖೆಯನ್ನು ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಇಲಾಖೆಗೆ ವಹಿಸಲಾಗಿದೆ. ಈ ಬಗ್ಗೆ 24 ಗಂಟೆಗಳ ಒಳಗೆ ವರದಿ ನೀಡುವಂತೆ ಬುಜ್ದಾರ್ ಅವರು ಪೊಲೀಸರಿಗೆ ಕರೆ ನೀಡಿದ್ದಾರೆ. ನಗರದ ಇತರ ಕೆಲವು ಭಾಗಗಳಲ್ಲಿಯೂ ಇದೇ ರೀತಿಯ ದಾಳಿಗಳು ಸಂಭವಿಸಬಹುದು ಎಂದು ಅಂದಾಜಿಸಲಾಗಿದೆ.








