ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುವುದನ್ನು ಮುಂದುವರಿಸಿದ್ದು, ಇದೀಗ ಮತ್ತೆ ಕಾಶ್ಮೀರ ವಿಚಾರವಾಗಿ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.
ಇತ್ತೀಚೆಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ಕೊಟ್ಟಿದ್ದ ಶಾಹೀದ್ ಅಫ್ರಿದಿ, ಪ್ರಧಾನಿ ಮೋದಿ ಅವರನ್ನು ಕೊರೊನಾಗಿಂತ ದೊಡ್ಡ ಕಾಯಿಲೆ ಎಂದಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇನ್ನು ಆಫ್ರಿದಿಯ ಈ ಮಾತಿಗೆ ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ ಕಟುವಾಗಿ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ 70 ವರ್ಷಗಳಿಂದ ಕಾಶ್ಮೀರಕ್ಕಾಗಿ ಭಿಕ್ಷೆ ಬೇಡುತ್ತಿದೆ. ಆಫ್ರಿದಿ, ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಸೇನಾ ಮುಖ್ಯಸ್ಥ ಬಜ್ವಾರಂತಹ ಜೋಕರ್ ಗಳು ಭಾರತ ಹಾಗೂ ನರೇಂದ್ರ ಮೋದಿಯ ವಿರುದ್ಧ ವಿಷವನ್ನು ಕಕ್ಕುತ್ತಾರೆ. ಈ ಮೂಲಕ ಪಾಕಿಸ್ತಾನದ ಜನರನ್ನು ಮುಟ್ಠಾಳರನ್ನಾಗಿ ಮಾಡುತ್ತಿದ್ದಾರೆ. ಆದರೆ ಇದರ ಮೂಲಕ ಕಾಶ್ಮೀರವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಬಾಂಗ್ಲಾದೇಶವನ್ನು ಒಮ್ಮೆ ನೆನಪಿಸಿಕೊಳ್ಳಿ ಎಂದು ಟಕ್ಕರ್ ನೀಡಿದ್ದಾರೆ.









