ಹೊಸ ದಿಲ್ಲಿ, ಮೇ 17: ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರದಾದ್ಯಂತ ಇನ್ನೆರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜ್ಯ ಸರಕಾರಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲಾಕ್ ಡೌನ್ 4.0 ರ ಹೊಸ ಮಾರ್ಗಸೂಚಿಗಳನ್ನು ಕಳುಹಿಸಿದೆ.
ಲಾಕ್ ಡೌನ್ 4 ರ ಮಾರ್ಗಸೂಚಿಗಳ ವಿವರ
- ರಾಷ್ಟ್ರದಾದ್ಯಂತ ಮೇ 31ರವರೆಗೆ ಲಾಕ್ ಡೌನ್ ಮುಂದುವರಿಕೆ.
- ರಾಷ್ಟ್ರದಾದ್ಯಂತ ಎಲ್ಲಾ ಚಟುವಟಿಕೆಗಳ ಮೇಲೆ ಸಂಪೂರ್ಣ ನಿರ್ಬಂಧ ಮುಂದುವರಿಕೆ.
- ತುರ್ತು ವೈದ್ಯಕೀಯ ಸೇವೆಗಳು, ಏರ್ ಆ್ಯಂಬುಲೆನ್ಸ್ ಸೇವೆಗಳು ಮತ್ತು ರಕ್ಷಣಾ ಉದ್ದೇಶಗಳನ್ನು ಹೊರತುಪಡಿಸಿ ಯಾವುದೇ ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ಇರುವುದಿಲ್ಲ.
- ಮೆಟ್ರೋ ರೈಲು ಸೇವೆಗಳಿಗೆ ಅನುಮತಿ ಇಲ್ಲ
- ಶಾಲಾ ಕಾಲೇಜುಗಳು, ತರಬೇತಿ ಸಂಸ್ಥೆಗಳು ಸೇರಿದಂತೆ ಯಾವುದೇ ರೀತಿಯ ಶೈಕ್ಷಣಿಕ ಸಂಸ್ಥೆಗಳ ಕಾರ್ಯಚರಣೆ ಇಲ್ಲ.
- ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ.
- ಸಿನೆಮಾ ಥಿಯೇಟರ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ ಗಳು, ಸ್ವಿಮ್ಮಿಂಗ್ ಪೂಲ್ ಗಳು, ಮನೋರಂಜನಾ ಪಾರ್ಕ್ ಗಳು, ಮಲ್ಟಿಪ್ಲೆಕ್ಸ್ ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳು, ಆಡಿಟೋರಿಯಂಗಳು, ಸಭಾಂಗಣಗಳು, ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗಳನ್ನು ತೆರೆಯಲು ಅವಕಾಶ, ಆದರೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
- ಎಲ್ಲಾ ರೀತಿಯ ಸಾರ್ವಜನಿಕ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧ ಮುಂದುವರಿಕೆ.
- ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಮುಂದುವರಿಕೆ
- 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿಯರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು, 10 ವರ್ಷದೊಳಗಿನ ಮಕ್ಕಳು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು.
- ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಈ ಕೆಳಗಿನ ಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಒಪ್ಪಿಗೆಯ ಮೇರೆಗೆ ಅಂತರ್ ರಾಜ್ಯ ಪ್ರಯಾಣಿಕ ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಷರತ್ತಿನೊಂದಿಗೆ ಅವಕಾಶ.
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರ್ಧಾರದ ಮೇರೆಗೆ ಷರತ್ತಿನೊಂದಿಗೆ ರಾಜ್ಯದೊಳಗಿನ ಪ್ರಯಾಣಿಕರ ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಅವಕಾಶ.
ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕಾರ್ಯ ಮುಂದುವರಿಕೆ
ಕೋವಿಡ್ 19 ತಡೆಗಟ್ಟಲು ರಾಷ್ಟ್ರೀಯ ನಿರ್ದೇಶನಗಳು ಈ ಮೊದಲಿನ ಆದೇಶದಂತೆ ಮುಂದುವರಿಯಲಿದೆ.








