ಇಂಡೋ – ಆಫ್ರಿಕಾ 2ನೇ ಏಕದಿನ ಪಂದ್ಯ : ವಿರಾಟ್ ಕೊಹ್ಲಿ ಡಕೌಟ್
ಪಾರ್ಲ್ ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ಮೂರು ಮ್ಯಾಚ್ ಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯ ಸೋತು ಹಿನ್ನಡೆ ಅನುಭವಿಸಿದೆ.
ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಇಂದಿನ ಪಂದ್ಯದಲ್ಲಿ ಟಾಸ್ ವಿನ್ ಗೆದ್ದ ಕೆ.ಎಲ್.ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕರಾಗಿ ಬಂದ ಕೆ.ಎಲ್.ರಾಹುಲ್, ಶಿಖರ್ ಧವನ್ ತಂಡಕ್ಕೆ ಉತ್ತಮ ಆರಂಭ ನೀಡಿದರು.
ಈ ಜೋಡಿ ಐವತ್ತು ರನ್ ಗಳ ಜೊತೆಯಾಟ ನೀಡಿತು. ಈ ಹಂತದಲ್ಲಿ 29 ರನ್ ಗಳಿಸಿದ್ದ ಶಿಖರ್ ಧವನ್, ಮಾರ್ಕ್ರಂ ಗೆ ವಿಕೆಟ್ ಒಪ್ಪಿಸಿದರು.
ಇದಾದ ಬಳಿಕ ಕ್ರೀಸ್ ಗೆ ಬಂದ ವಿರಾಟ್ ಮಹಾರಾಜನ್ ಬೌಲಿಂಗ್ ನಲ್ಲಿ ಐದು ಎಸೆತಗಳನ್ನು ಎದುರಿಸಿ ಡಕೌಟ್ ಆದರು. ಆ ಮೂಲಕ ನಿರಾಸೆ ಅನುಭಿಸಿದರು.
ಇನ್ನು ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಕ್ಯಾಪ್ಟನ್ಸಿಯಿಂದ ದೂರ ಇದ್ದು, ಕೇವಲ ಸಾಮಾನ್ಯ ಆಟಗಾರನಾಗಿ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.








