ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಕ್ಯಾನ್ಸಲ್
ಬೆಂಗಳೂರು : ರಾಜ್ಯದಲ್ಲಿ ಜಾರಿ ಇದ್ದ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.
ಕೊರೊನಾ ಹೆಚ್ಚಳ ಮತ್ತು ವೀಕೆಂಡ್ ಕರ್ಫ್ಯೂ ರದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಆದ್ರೆ ಉಳಿದ ನಿಯಮಗಳು ಎಂದಿನಂತೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.
ಅಲ್ಲದೇ ಜನರು ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ರಾತ್ರಿ 10 ರಿಂದ 5 ರವರೆಗೂ ರಾಜ್ಯದಲ್ಲಿ ನೈಟ್ ಕರ್ಫ್ಯೂಯಲ್ಲಿರಲಿದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದ್ರೆ ವೀಕೆಂಡ್ ಕರ್ಫ್ಯೂ ಮತ್ತೆ ಜಾರಿ ಮಾಡುತ್ತೇವೆ.
ಈ ವಾರದಿಂದಲೇ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಉಳಿದ ಕೋವಿಡ್ ನಿಯಮ ಎಂದಿನಂತೆ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.









