ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ : ಭಾರತದಲ್ಲಿಯೇ ನಡೆಯಲಿದೆ ಐಪಿಎಲ್
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಗುಡ್ ನ್ಯೂಸ್ ನೀಡಿದೆ. ಈ ಬಾರಿಯ ಐಪಿಎಲ್ ಅನ್ನು ಭಾರತದಲ್ಲಿಯೇ ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ದೇಶದಲ್ಲಿ ಸದ್ಯ ಕೊರೊನಾ ಸೋಂಕಿನ ಮೂರನೇ ಅಲೆಯ ಆರ್ಭಟ ಜೋರಾಗಿದೆ. ಹೀಗಾಗಿ ಕಳೆದ ಬಾರಿಯಂತೆ ಈ ಬಾರಿ ಕೂಡ ಐಪಿಎಲ್ ಅನ್ನು ಬೇರೆ ಕಡೆ ನಡೆಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಈ ಬಗ್ಗೆ ಬಿಸಿಸಿಐ ಮೂಲಗಳು ಸ್ಪಷ್ಟನೆ ನೀಡಿದ್ದು, ಭಾರತದಲ್ಲಿಯೇ ಐಪಿಎಲ್ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರಂತೆ
ಮೂಲಗಳ ಪ್ರಕಾರ ಈ ಬಾರಿಯ ಐಪಿಎಲ್ ಅನ್ನು ಎರಡು ಅಥವಾ ಮೂರು ಮೈದಾನಗಳಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆದಿಸಿದೆಯಂತೆ. ಮುಂಬೈನ ವಾಂಖೇಡೆ ಮೈದಾನ ಮತ್ತು ಪುಣೆಯಲ್ಲಿ ಎಲ್ಲಾ ಮ್ಯಾಚ್ ಗಳನ್ನು ನಡೆಸಲು ಪ್ಲಾನ್ ನಡೆಯುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಮೈದಾನಕ್ಕೆ ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ.
ಇನ್ನು ಈ ಬಾರಿಯ ಐಪಿಎಲ್ ಗಾಗಿ ಮೆಗಾ ಹರಾಜು ನಡೆಯಲಿದ್ದು, ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ.









