ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಜನ್ಮ ದಿನಕ್ಕೆ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ. ಟ್ವೀಟ್ ಮಾಡುವ ಮೂಲಕ ಶುಭಾಶಯಗಳು ತಿಳಿಸಿದ ಅವರು, ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು ಹೆಚ್.ಡಿ. ದೇವೇಗೌಡರು. ಅವರ ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿದೆ ಎಂದು ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಹೊಗಳಿದ್ದಾರೆ. ಜೊತೆಗೆ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








