ಪಂಚರಾಜ್ಯ ಚುನಾವಣೆ – ಜನವರಿ 31ರ ವರೆಗೆ ಬಹಿರಂಗ ಸಭೆ, ರ್ಯಾಲಿ ನಿಷೇಧ
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಹಿನ್ನಲೆಯಲ್ಲಿ, ಚುನಾವಣಾ ಆಯೋಗವು ಚುನಾವಣೆ ನಡೆಯುತ್ತಿರುವ 5 ರಾಜ್ಯಗಳಲ್ಲಿ ರ್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜನವರಿ 31 ರವರೆಗೆ ವಿಸ್ತರಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ಮತ್ತು ಐದು ರಾಜ್ಯಗಳ ಮುಖ್ಯ ಆರೋಗ್ಯ ಕಾರ್ಯದರ್ಶಿಗಳೊಂದಿಗಿನ ಸಭೆಯ ನಂತರ ಚುನಾವಣಾ ಆಯೋಗವು ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಪಂಜಾಬ್, ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಜನವರಿ 31 ರವರೆಗೆ ರೋಡ್‌ಶೋಗಳು ಮತ್ತು ಪ್ರಚಾರ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ಇಸಿ ನಿರ್ಧರಿಸಿದೆ.
ಆದಾಗ್ಯೂ, ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ಜನರು ಅಥವಾ ಸಭಾಂಗಣದ ಸಾಮರ್ಥ್ಯದ ಶೇಕಡಾ 50 ರಷ್ಟು ಒಳಾಂಗಣ ಸಭೆಗಳನ್ನು ನಡೆಸಲು ಸಡಿಲಿಕೆ ನೀಡಿದೆ.