ಹಲೋ ಅಹಮದಾಬಾದ್.. ನಾನೇನೆಂದು ತೋರಿಸುತ್ತೇನೆ ahmedabad-captain hardik-pandya
ಐಪಿಎಲ್ ನಲ್ಲಿ ಹೊಸ ಫ್ರಾಂಚೈಸಿ ಅಹಮದಾಬಾದ್ ತಂಡದ ನೂತನ ನಾಯಕರಾಗಿ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಮುಂಬರುವ ಸೀಸನ್‌ಗಾಗಿ ಹಾರ್ದಿಕ್ ಪಾಂಡ್ಯ 15 ಕೋಟಿ ರುಪಾಯಿಗಳಿಗೆ ಅಹಮದಾಬಾದ್ ತಂಡದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಹಾರ್ದಿಕ್ ನಾಯಕನಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಐಪಿಎಲ್‌ನಲ್ಲಿ ಅಹಮದಾಬಾದ್‌ನೊಂದಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹಾರ್ದಿಕ್ ಹೇಳಿದ್ದಾರೆ.
“ಹಲೋ ಅಹಮದಾಬಾದ್. ಐಪಿಎಲ್‌ನಲ್ಲಿ ಅಹಮದಾಬಾದ್ ತಂಡದೊಂದಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನನಗೆ ತುಂಬಾ ಸಂತೋಷವಾಗಿದೆ. ನನ್ನ ಮೇಲೆ ವಿಶ್ವಾಸವಿಟ್ಟು ನಾಯಕನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಮ್ಯಾನೇಜ್‌ಮೆಂಟ್ ಗೆ ಧನ್ಯವಾದಗಳು. ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದು ಹಾರ್ದಿಕ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ 2015 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ನಲ್ಲಿ ಪಾದಾರ್ಪಣೆ ಮಾಡಿದ್ದರು.









