ಮಂಗಳೂರು, ಮೇ 18 : ಅಂಫಾನ್’ ಚಂಡಮಾರುತದ ಕಾರಣದಿಂದ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ ಮುಂದುವರಿದಿದೆ. ಮೇ 18ರಂದು ಅಂಫಾನ್ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದ್ದು ರಾಜ್ಯದ ಕರಾವಳಿಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಅಲ್ಲದೆ ಕರಾವಳಿಯಲ್ಲಿ “ಯಲ್ಲೋ ಅಲರ್ಟ್” ಘೋಷಿಸಿ ಮುಂದಿನ ಮೂರು ದಿನಗಳ ಕಾಲ 64.5 ಮೀಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನೊಂದಿಗೆ ಗಾಳಿ ಕೂಡಾ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಭಾನುವಾರ ಸಂಜೆಯಿಂದಲೇ ಸುರಿಯಲಾರಂಭಿಸಿದ ಗುಡುಗು ಸಹಿತ ಮಳೆ ಸೋಮವಾರವೂ ಮುಂದುವರಿದಿದೆ.
ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...








