ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ 32 ಮಂದಿ ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಅಯೋಧ್ಯೆಯಲ್ಲಿ ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 20 ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಉತ್ತರ ಪ್ರದೇಶದಿಂದ ಬಿಹಾರಕ್ಕೆ ವಲಸೆ ಕಾರ್ಮಿಕರು ತೆರಳುತ್ತಿದ್ದ ಬಸ್ ಗೆ ಖುಷಿನಗರ್ ಬಳಿ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ 8 ಮಂದಿಯ ಪರಿಸ್ಥಿತಿ ವಿಷಮವಾಗಿದೆ.








