ಜಮ್ಮು, ಮೇ 18 : ಭಾನುವಾರ ಜಮ್ಮು ಕಾಶ್ಮೀರದ ದೋಡ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಮೃತಪಟ್ಟಿದ್ದು, ಸೇನಾಪಡೆಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ. ಭಾರತೀಯ ಸೇನಾಪಡೆ, ದೋಡಾ ಪಟ್ಟಣದಿಂದ 26 ಕಿ.ಮೀ. ದೂರದ ಗುಂಡಾನ ವಲಯದ ಪೋಸ್ಟಾ ಪೋತ್ರಾ ಹಳ್ಳಿಯಲ್ಲಿ ಉಗ್ರರು ತಂಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಿತ್ತು. ಕಾರ್ಯಚರಣೆ ವೇಳೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದಾನೆ. ಈ ಸಂದರ್ಭದಲ್ಲಿ ಸೇನಾ ಪಡೆಯ ಯೋಧ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಗ್ರರ ತೆರವಿಗೆ ಸೇನಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ವಲಯದ ಐಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಈ ನಡುವೆ ಭಾನುವಾರ ಬೆಳಗ್ಗೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೇನಾ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾಪಡೆಗಳು ಗುಂಡಿನ ದಾಳಿ ನಡೆಸಿದೆ. ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಸೇನಾಪಡೆಯ ವಕ್ತಾರರು ತಿಳಿಸಿದ್ದಾರೆ.
SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...








