ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಜನರ ಆತಂಕಕ್ಕೆ ಕಾರಣವಾಗಿರುವ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಪಿಸಿಸಿಎಫ್ ಅಜಯ ಮಿಶ್ರಾ ಅವರು ಅನುಮತಿ ನೀಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಡಬೂರು,ಚಿರಕನಹಳ್ಳಿ, ಕುಂದಕರೆ, ಉಪಕಾರ ಹಾಗೂ ಬೊಮ್ಮನಹಳ್ಳಿಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು, ಇದುವರೆಗೂ 19 ಜಾನುವಾರುಗಳನ್ನು ಬಲಿಪಡೆದಿದೆ. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಜನರು ಮನೆಗಳಿಂದ ಆಚೆ ಬರಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆಗೆ ಹುಲಿಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿಕೊಂಡಿದ್ದರು. ಜನರ ಮನವಿಗೆ ಸ್ಪಂದಿಸಿರುವ ಅರಣ್ಯ ಇಲಾಖೆ ಇದೀಗ ಹುಲಿ ಸೆರೆಗೆ ಮುಂದಾಗಿದೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








