ಕೃಷ್ಣಾ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬಾಗಲಕೋಟೆಯ ರಬಕಬಿ ಪಟ್ಟಣದ ಬಳಿ ನಡೆದಿದೆ. 31 ವರ್ಷದ ಬನಹಳ್ಳಿ ಪಟ್ಟಣದ ನಿವಾಸಿ ಪ್ರಕಾಶ್ ಮಂಟೂರು ಮೃತ ದುರ್ದೈವಿಯಾಗಿದ್ದಾರೆ. ಇವರು ಸಿವಿಲ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇಂದು ಪ್ರಕಾಶ್ ಮಂಟೂರು ಅವರು ಸ್ನೇಹಿತರ ಜೊತೆ ರಬಕವಿ ಪಟ್ಟಣದ ಬಳಿ ಇರುವ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತೇರದಾಳ ಠಾಣಾ ಪೊಲೀಸರು ಈಜುಗಾರರ ಸಹಾಯದಿಂದ ಮೃತದೇಹವನ್ನು ಹೊರ ತೆಗೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.








