ದೇಶದಲ್ಲಿ ಲಾಕ್ ಡೌನ್ 4.0 ಜಾರಿಯಲ್ಲಿದ್ದು, ರಾಜ್ಯ ಸರ್ಕಾರ ಹಲವು ಸಡಿಲಿಕೆಗಳನ್ನು ನೀಡಿದೆ. ಮಾಲ್, ಚಿತ್ರಮಂದಿರ, ಜಿಮ್ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ – ಮುಂಗಟ್ಟುಗಳನ್ನು ತೆರೆಯಲು ಸರ್ಕಾರ ಅನುಮತಿಸಿದೆ. ಆದ್ರೆ ಪ್ರತಿ ಭಾನುವಾರ ರಾಜ್ಯದಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಅಂದು ಎಲ್ಲ ವ್ಯವಹಾರಗಳನ್ನು ಬಂದ್ ಮಾಡಬೇಕಾಗಿದೆ. ಈ ಹಿನ್ನೆಲೆ ಇನ್ಮುಂದೆ ಭಾನುವಾರ ಮದ್ಯದಂಗಡಿ ಓಪನ್ ಆಗಿರಲ್ಲ.
ಭಾನುವಾರ ಯಾವುದೇ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಮದುವೆ ಸಮಾರಂಭ ಕೂಡ ಭಾನುವಾರ ಹೊರತುಪಡಿಸಿ ಇತರೆ ದಿನಗಳಲ್ಲಿ ನಡೆಸಬಹುದಾಗಿದ್ದು, ಈ ವೇಳೆ ಕೇವಲ 50 ಮಂದಿ ಮಾತ್ರ ಭಾಗವಹಿಸಬಹುದಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಟಿಯಲ್ಲಿ ಈ ಎಲ್ಲ ಮಾಹಿತಿ ನೀಡಿದ್ದು, ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.








