ಪದ್ಮಶ್ರೀ ತಿರಸ್ಕರಿಸಿದ್ದ ಗಾಯಕಿ ಸಂದ್ಯಾ ಮುಖರ್ಜಿ ಆಸ್ಪತ್ರೆಗೆ ದಾಖಲು..
ಹಿರಿಯ ಹಿನ್ನೆಲೆ ಗಾಯಕಿ ಸಂಧ್ಯಾ ಮುಖರ್ಜಿ (90) ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಕರೆ ಬಂದ ನಂತರ ಕುಟುಂಬ ಸದಸ್ಯರು ಸಂಧ್ಯಾ ಮುಖರ್ಜಿ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಗಾಯಕಿಯನ್ನು ಕೋಲ್ಕತ್ತಾ ಟ್ರಾಫಿಕ್ ಪೋಲಿಸ್ ರಚಿಸಿದ ಗ್ರೀನ್ ಕಾರಿಡಾರ್‌ನ ಮೂಲಕ ಆಕೆಯ ದಕ್ಷಿಣ ಕೋಲ್ಕತ್ತಾ ನಿವಾಸದಿಂದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಎಸ್ ಎಸ್ ಕೆಎಂ ಆಸ್ಪತ್ರೆಯಲ್ಲಿ ಅನುಭವಿ ವೈದ್ಯರ ತಂಡದೊಂದಿಗೆ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸಲಾಗಿದೆ. ಅವರಿಗೆ ಶ್ವಾಸಕೋಶದ ಸೋಂಕು ಹಾಗೂ ಉಸಿರಾಟದ ತೊಂದರೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯನ್ನು ಆಸ್ಪತ್ರೆಯ ವುಡ್‌ಬರ್ನ್ ಘಟಕದಲ್ಲಿ ದಾಖಲಿಸಲಾಗಿದೆ.
‘ಬಂಗಾ ಬಿಭೂಷಣ’ ಮತ್ತು ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಾದ ಗಾಯಕಿ, ಒಂದೆರಡು ದಿನಗಳ ಹಿಂದೆ ಪದ್ಮಶ್ರೀ ಪ್ರಶಸ್ತಿಯ ಪ್ರಸ್ತಾಪವನ್ನು ನಿರಾಕರಿಸಿದರು,








