ಚಿಕ್ಕಮಗಳೂರು, ಮೇ 18: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು, ಸರ್ಕಾರ ಸೂಚಿಸಿರುವ ನಿಯಮ ಹಾಗೂ ನಿರ್ದೇಶನಗಳನ್ನು ಪಾಲಿಸುವ ಮೂಲಕ ರಂಜಾನ್ ಮಾಸಾಚರಣೆಯನ್ನು ಆಚರಿಸುವಂತೆ ಮುಸ್ಲಿಂ ಬಾಂಧವರಲ್ಲಿ ಕೇಳಿಕೊಂಡಿದ್ದಾರೆ.
ರಂಜಾನ್ ಮಾಸವು ಉಪವಾಸವಿದ್ದು, ಆತ್ಮನಿವೇದನೆ ಮಾಡಿಕೊಳ್ಳುವ ಸಮಯ. ಆದರೆ ಈ ಬಾರಿ ಕೊರೊನಾ ಸೋಂಕು ಎಲ್ಲೆಡೆ ವ್ಯಾಪಿಸಿದ್ದು, ಜನರ ಹಬ್ಬದ ಸಡಗರವನ್ನು ಕಸಿದುಕೊಂಡಿದೆ. ನಮ್ಮೆಲ್ಲರ ಸುರಕ್ಷತೆಗಾಗಿ ಸರ್ಕಾರ ದೇವಾಲಯ, ಮಸೀದಿ, ಚರ್ಚುಗಳಲ್ಲಿ ಉತ್ಸವ, ಪ್ರಾರ್ಥನೆ ಮಾಡುವುದನ್ನು ನಿರ್ಬಂಧಿಸಿದ್ದು, ಇದರಲ್ಲಿ ಜನರ ನಂಬಿಕೆಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಕೊರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ವ್ಯಾಪಕವಾಗಿ ಹರಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಕೊರೊನಾ ಸೋಂಕನ್ನು ತಡೆಗಟ್ಟಬಹುದಾಗಿದೆ. ಈ ಬಾರಿಯ ರಂಜಾನ್ ಮಾಸಾಚರಣೆಯಲ್ಲಿ ಮುಸಲ್ಮಾನ ಬಾಂಧವರು ಪ್ರಸ್ತುತ ಸನ್ನಿವೇಶಕ್ಕೆ ಅನುಗುಣವಾಗಿ ಸ್ವಯಂ ನಿರ್ಧಾರ ಕೈಗೊಂಡು ರಂಜಾನ್ ಆಚರಿಸಬೇಕಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಅನುಮತಿ ದೊರಕಿದರೆ, ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಆಚರಿಸಬೇಕು. ಅನುಮತಿ ಸಿಗದಿದ್ದರೆ ಮನೆಯಲ್ಲಿಯೇ ಪ್ರಾರ್ಥಿಸುವ ಮೂಲಕ ಕೊರೊನಾ ತಡೆಗಟ್ಟಲು ಸಹಕರಿಸಬೇಕು.
ಪ್ರತಿಯೊಬ್ಬರು ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಸದ್ಯಕ್ಕೆ ಕೊರೊನಾ ಸೋಂಕಿಗೆ ಯಾವುದೇ ಔಷಧಿ ಕಂಡು ಹಿಡಿದಿಲ್ಲ. ಹೊರ ರಾಜ್ಯ ಅಥವಾ ದೇಶದಿಂದ ಯಾವುದೇ ವ್ಯಕ್ತಿಗಳು ಬಂದಲ್ಲಿ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ರಂಜಾನ್ ಆಚರಣೆಯ ವೇಳೆ ಇರುವ ವಿನಾಯಿತಿಯಂತೆ ಹಬ್ಬವನ್ನು ಆಚರಿಸಿ ಎಂದು ಹೇಳಿದರು.
ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!
ಬೆಂಗಳೂರು: ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಈಗ ಭಾರಿ ದೊಡ್ಡ ರಾಜಕೀಯ ಪಲ್ಲಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಮುಂದಿನ ನವೆಂಬರ್ ತಿಂಗಳು ರಾಜ್ಯ ಬಿಜೆಪಿಯ ಇತಿಹಾಸದಲ್ಲಿ ಮಹತ್ವದ ತಿರುವು ನೀಡುವ...






