Covid 19 Update | ಕಳೆದ 24 ಗಂಟೇಲಿ 2,09,918 ಹೊಸ ಕೇಸ್ ಪತ್ತೆ Covid-19 update India
ನವದೆಹಲಿ : ಭಾರತದಲ್ಲಿ ಕೊರೊನ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,09,918 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 959 ಮಂದಿ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ನಿನ್ನೆ 959 ಮಂದಿಯ ಸಾವಿನೊಂದಿಗೆ ಈವರೆಗೆ ದೇಶದಲ್ಲಿ ಸುಮಾರು 4,95,050 ಮಂದಿ ಮೃತಪಟ್ಟಿದ್ದಾರೆ.
ಇಂದಿನ ಪ್ರಕರಣಗೊಂದಿಗೆ ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಬಂದು ನಿಂತಿದೆ.
ಒಟ್ಟು ಸೋಂಕಿತರಲ್ಲಿ ಶೇಕಡಾ 4.43 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಇತ್ತ ದೇಶದಲ್ಲಿ ಈವರೆಗೆ ಸುಮಾರು 1,66,03,96,227 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ.









