ಬೆಳಗಾವಿ : ಕನ್ನಡದ ಜೊತೆಗೆ ಮರಾಠಿ ಭಾಷೆಯಲ್ಲೂ ಸರ್ಕಾರದ ಸೂಚನೆಗಳನ್ನು ನೀಡಬೇಕೆಂದು ಅಧಿಕಾರಿಗಳಿಗೆ ಖಾನಾಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ಸೂಚನೆ ನೀಡಿದ್ದು, ವಿವಾದಕ್ಕೆ ನಾಂದಿಯಾಡಿದ್ದಾರೆ. KANNADIGAS OUTRAGE AGAINST MLA ANJALI NIMBALKAR MARATHI LOVE
ಬೆಳಗಾವಿಯ ಖಾನಾಪುರ ತಾಲೂಕಿನ ಗ್ರಾಮ ಒನ್ ಕೇಂದ್ರದ ಉದ್ಘಾಟನೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಗಮಿಸಿದ್ದರು.
ಈ ವೇಳೆ ಮಾತನಾಡಿದ ಅಂಜಲಿ ನಿಂಬಾಳ್ಕರ್, ಖಾನಾಪುರ ತಾಲೂಕಿನಲ್ಲಿ ಕನ್ನಡ ಬಾರದ ಜನರಿಗೆ ಮರಾಠಿಯಲ್ಲಿ ಮಾಹಿತಿ ನೀಡಿ.
ಕನ್ನಡ ಭಾಷೆಯ ನಾಮಫಲಕ ಜೊತೆ ಮರಾಠಿ ಭಾಷೆಯಲ್ಲೂ ನಾಮಫಲಕ ಅಳವಡಿಸಿ. ಖಾನಾಪುರ ತಾಲೂಕಿನಲ್ಲಿ ಮರಾಠಿ, ಕನ್ನಡ ಎರಡು ಭಾಷೆಯ ಜನರಿದ್ದಾರೆ.
ಸಾಕಷ್ಟು ಜನರಿಗೆ ಕನ್ನಡ ಭಾಷೆ ತಿಳಿಯಲ್ಲ, ಅರ್ಥ ಆಗಲ್ಲ ಎಂದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಶಾಸಕಿಯ ಈ ನಡೆಗೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ.









