ಬೆಂಗಳೂರು, ಮೇ 19 : ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹದಲ್ಲಿ ಅಧಿಕಾರಿಗಳು ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದೆ.
ನಿಖಿಲ್ ವಿವಾಹಕ್ಕೆ ಸಂಬಂಧಿಸಿದಂತೆ ವಕೀಲೆ ಗೀತಾ ಮಿಶ್ರಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ಪ್ರಮಾಣಪತ್ರ ಸಲ್ಲಿಸಿದ್ದು, ಕುಟುಂಬದ ನೂರು ಮಂದಿ ಸದಸ್ಯರ ಪಾಲ್ಗೊಳ್ಳುವಿಕೆಗೆ ಅನುಮತಿ ಪಡೆಯಲಾಗಿತ್ತು ಎಂದು ವಿವರಿಸಿದ್ದಾರೆ. ವಿವಾಹದ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿದೆ ಎಂಬ ಬಗ್ಗೆ ಉತ್ತರಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದ್ದು, ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ವಿವಾಹದ ಸಂದರ್ಭದಲ್ಲಿ ಅಧಿಕಾರಿಗಳು ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಧಿಕಾರಿಗಳು ಮಾಡಿದ ತಪ್ಪನ್ನು ಸರ್ಕಾರ ಸಮರ್ಥನೆ ಮಾಡುತ್ತಿದೆ ಎಂದು ಹೇಳಿದೆ.
ಟೀಂ ಇಂಡಿಯಾದ ಮುಂದಿನ ಏಕದಿನ ಸರಣಿಗಳು – 2027ರ ವಿಶ್ವಕಪ್ಗೂ ಮುನ್ನ 9 ಸರಣಿಗಳು!
2027ರ ಏಕದಿನ ವಿಶ್ವಕಪ್ ಆರಂಭವಾಗುವ ಮೊದಲು, ಟೀಂ ಇಂಡಿಯಾ ಒಟ್ಟು 9 ಏಕದಿನ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಭಾರತವು 2025 ಮತ್ತು 2026ರಲ್ಲಿ...