Union budget 2022 | ಬಜೆಟ್‍ನಲ್ಲಿ ರಾಜ್ಯಕ್ಕೆ ಏನೂ ಇಲ್ಲ
ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ ಮಂಡಿಸಿದ್ದಾರೆ. union-budget-2022- MP prajwal revanna reaction
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರಜ್ವಲ್ ರೇವಣ್ಣ, ಈ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆ ಹಾಗೂ ನಂಬಿಯನ್ನು ಹುಸಿ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಜೆಟ್ ಬಗ್ಗೆ ಮಾತನಾಡಿರುವ ಪ್ರಜ್ವಲ್ ರೇವಣ್ಣ, ಈ ಬಜೆಟ್ ನಲ್ಲಿ ಯಾವುದೇ ಸತ್ವವಿಲ್ಲ, ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ನಮ್ಮ ರಾಜ್ಯದ 25 ಸಂಸದರು ರಾಜ್ಯಕ್ಕೆ ಏನು ತಂದಿದ್ದಾರೆ ಎಂದು ಪ್ರಶ್ನಿಸಿದರು.
ಇನ್ನು ಕೇಂದ್ರ ಬಜೆಟ್ ನಲ್ಲಿ ದಕ್ಷಿಣ ಭಾರತಕ್ಕೆ ಯಾವ ಅನುಕೂಲವನ್ನು ಮಾಡಿಲ್ಲ. ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ.
ಎಮ್ಸ್ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಮೂಲಸೌಕರ್ಯಕ್ಕೆ ನೆರವು ಕೂಡ ಸಿಗಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.









