ಬೆಂಗಳೂರು, ಮೇ 19 : ಲಾಕ್ ಡೌನ್ ಸಡಿಲಿಕೆ ಮಾಡಿರುವ ಕಾರಣ ಮಂಗಳವಾರದಿಂದ (ಮೇ 19) ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಎಲ್ಲರೂ ಹಾಜರಾಗಬೇಕು ಮತ್ತು ಶೇ 100ರಷ್ಟು ಹಾಜರಾತಿ ಇರಬೇಕು ಎಂದು ಅವರು ಆದೇಶಿಸಿದ್ದಾರೆ.
ಇಲ್ಲಿಯವರೆಗೆ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದ ಕಾರಣ ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳ ಎಲ್ಲ ಸಿಬ್ಬಂದಿ, ಇತರ ಇಲಾಖೆಗಳ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ 33ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿತ್ತು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹೇಳಿದ್ದಾರೆ.
ಟೀಂ ಇಂಡಿಯಾದ ಮುಂದಿನ ಏಕದಿನ ಸರಣಿಗಳು – 2027ರ ವಿಶ್ವಕಪ್ಗೂ ಮುನ್ನ 9 ಸರಣಿಗಳು!
2027ರ ಏಕದಿನ ವಿಶ್ವಕಪ್ ಆರಂಭವಾಗುವ ಮೊದಲು, ಟೀಂ ಇಂಡಿಯಾ ಒಟ್ಟು 9 ಏಕದಿನ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಭಾರತವು 2025 ಮತ್ತು 2026ರಲ್ಲಿ...