ಎಎಸ್ ಐ ಮೇಲೆ ಗುಂಡಿನ ದಾಳಿ | ಗಾಯಗೊಂಡ ಪೊಲೀಸ್ ಆಸ್ಪತ್ರೆಗೆ ದಾಖಲು Saaksha Tv
ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಿಶಿಜಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಎಎಸ್ಐ ಶಬೀರ್ ಅಹ್ಮದ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆದಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಎಎಸ್ ಐ ಶಬಿರ್ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಿಸಿದ್ದಾರೆ. ಇವರು ಶೋಪಿಯಾನ್‌ನ ಅಮಿಶಿಜಿಪೋರಾ ಪ್ರದೇಶದಲ್ಲಿ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಸಿದ್ದಾರೆ.
ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಪೊಲೀಸರು ಈ ಪ್ರದೇಶ ಸುತ್ತುವರಿದಿದ್ದು, ಉಗ್ರರಿಗಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ









