ಆರ್ಥಿಕ ಸಂಕಷ್ಟದ ಮಧ್ಯೆ ಬಜೆಟ್ ಮಂಡನೆ ಅನಿವಾರ್ಯ Saaksha Tv
ಬೆಂಗಳೂರು: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದು, ಆರ್ಥಿಕ ಸಂಕಷ್ಟದ ಮಧ್ಯೆ ಬಜೆಡ್ ಮಂಡಿಸುವ ಇಕ್ಕಟ್ಟಿನಲ್ಲಿ ಸಿಎಂ ಬೊಮ್ಮಾಯಿ ಸಿಲುಕಿದ್ದಾರೆ.
2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಬೊಮ್ಮಾಯಿ ಮೇಲಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. ಆದರೆ ಆರ್ಥಿಕ ಸಂಕಷ್ಟ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆಗೆ ಅಡ್ಡಗಾಲಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.
ಆದಾಯ ಸಂಗ್ರಹ ಸೊರಗಿರುವ ಕಾರಣ ಬಜೆಟ್ಗೆ ಹಣ ಹೊಂದಿಸುವುದು ಕಷ್ಟಕರವಾಗಿದೆ. ಆರ್ಥಿಕ ಸಂಕಷ್ಟದ ಮಧ್ಯೆ ಜನರಿಗೆ ಹೊರೆಯಾಗದ ಬಜೆಟ್ ಮಂಡಿಸುವುದು ಸಿಎಂ ಬೊಮ್ಮಾಯಿಗೆ ಅನಿವಾರ್ಯವಾಗಿದೆ. ಸದ್ಯ ರಾಜ್ಯದ ಆರ್ಥಿಕ ಸ್ಥಿತಿ ಕಳೆದ ವರ್ಷಕ್ಕಿಂತ ಉತ್ತಮವಾಗಿದ್ದರೂ ಈ ಬಾರಿ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಅದರಲ್ಲೂ ಮೂರನೇ ಅಲೆಯ ಹಿನ್ನೆಲೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹೇರಿದ್ದ ಕಾರಣ ಆದಾಯ ಸಂಗ್ರಹದಲ್ಲಿ ಮತ್ತೆ ಹಿನ್ನಡೆಯಾಗಿದೆ.
ಇತ್ತ ಬದ್ಧ ವೆಚ್ಚ ಗಣನೀಯ ಏರಿಕೆಯಾಗಿದೆ. ಸುಮಾರು ಶೇ 102ರಷ್ಟು ಬದ್ಧ ವೆಚ್ಚ ಏರಿಕೆಯಾಗಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸೊರಗಿದ ತೆರಿಗೆ ಮೂಲಗಳಿಂದ ನಿರೀಕ್ಷಿತ ಆದಾಯ ಬರದೇ ಇರುವುದು ಸಿಎಂ ಬೊಮ್ಮಾಯಿಗೆ ತಲೆನೋವಾಗಿ ಪರಿಣಮಿಸಿದೆ.








