ಮಂಗಳೂರು, ಮೇ 19 : ರಾಜ್ಯದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ( ಮೇ19 ಮತ್ತು 20) ಅಂಫನ್ ಚಂಡಮಾರುತ ಪ್ರಭಾವದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಈ ಪ್ರದೇಶಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಪೂರ್ವ ಕರಾವಳಿಯಲ್ಲಿ ತಲೆದೋರಿರುವ ಚಂಡಮಾರುತಗಳಿಂದಾಗಿ 64ಮಿ.ಮೀ.ನಿಂದ 115 ಮಿ.ಮೀ.ನಷ್ಟು ಮಳೆ ಸುರಿಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟೀಂ ಇಂಡಿಯಾದ ಮುಂದಿನ ಏಕದಿನ ಸರಣಿಗಳು – 2027ರ ವಿಶ್ವಕಪ್ಗೂ ಮುನ್ನ 9 ಸರಣಿಗಳು!
2027ರ ಏಕದಿನ ವಿಶ್ವಕಪ್ ಆರಂಭವಾಗುವ ಮೊದಲು, ಟೀಂ ಇಂಡಿಯಾ ಒಟ್ಟು 9 ಏಕದಿನ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಭಾರತವು 2025 ಮತ್ತು 2026ರಲ್ಲಿ...