West Bengal – ಟಿಎಂಸಿ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ಅವಿರೋಧ ಆಯ್ಕೆ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಮಮತಾ ಬ್ಯಾನರ್ಜಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಬುಧವಾರ ತಿಳಿಸಿದ್ದಾರೆ.
ಐದು ವರ್ಷಗಳ ಬಳಿಕ ಟಿಎಂಸಿಯಲ್ಲಿ ಸಾಂಸ್ಥಿಕ ಚುನಾವಣೆ ನಡೆದಿದೆ. ಇದೀಗ ಮಮತಾ ಬ್ಯಾನರ್ಜಿ ರಾಷ್ಟ್ರಮಟ್ಟದಲ್ಲಿ ಪಕ್ಷದ ವಿಸ್ತರಿಸಲು ಮುಂದಾಗುತ್ತಿದ್ದಾರೆ.
ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಟಿಎಂಸಿ ಪರವಾಗಿ ಪಕ್ಷದ ಸಾಂಸ್ಥಿಕ ಚುನಾವಣೆ ನಡೆಯಿತು. ಬಿಜೆಪಿ ಹೊರತುಪಡಿಸಿ ಉಳಿದೆಲ್ಲ ಪಕ್ಷಗಳಿಗೆ ಆಹ್ವಾನ ನೀಡಲಾಗಿತ್ತು.
2011ರಿಂದ ಬಂಗಾಳದಲ್ಲಿ ಟಿಎಂಸಿ ಅಧಿಕಾರದಲ್ಲಿದೆ
1998ರಲ್ಲಿ ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ ತೃಣಮೂಲ ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕೆ ಬಂದಿತ್ತು. 2001 ಮತ್ತು 2006ರ ಚುನಾವಣೆಯಲ್ಲಿ ಸೋತ ಪಕ್ಷ 2011ರಲ್ಲಿ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಈ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾ ಬಂದಿದೆ. ಕಳೆದ ವರ್ಷ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 294 ಸ್ಥಾನಗಳಲ್ಲಿ 213 ಸ್ಥಾನಗಳನ್ನು ಗಳಿಸಿದ ನಂತರ ಪಕ್ಷವು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿತು.