ಭೀಕರ ಅಪಘಾತ | ಇಬ್ಬರು ವಿದ್ಯಾರ್ಥಿಗಳ ಸಾವು Saaksha Tv
ಮೈಸೂರು: ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೌಳೇಶ್ವರ ರೆಡ್ಡಿ ಮತ್ತು ತೇಜಸ್ ಮೃತಪ್ಟವರು ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಕಾರಿನಲ್ಲಿ ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಮತ್ತು ಶುಭಂಕರ ಮೈಸೂರಿನ ಕಡೆಗೆ ಬರುತ್ತಿದ್ದರು. ಆಗ ಟ್ರಕ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ.
ಈ ಘಟನೆಯಿಂದ ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಾಯಗೊಂಡಿದ್ದು, ನಗರದ ಡಿಆರ್ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವನ್ನಪ್ಪಿದ ವಿದ್ಯಾರ್ಥಿಗಳು ಮೂಲತಃ ಶಿವಮೊಗ್ಗ, ಬೆಂಗಳೂರು, ಹಾಗೂ ಅರಸೀಕೆರೆಗೆ ಸೇರಿದವರಾಗಿದ್ದಾರೆ. ವಿದ್ಯಾರ್ಥಿಗಳ ಮೃತದೇಹವನ್ನು ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದ್ದು,. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








