ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ Saaksha Tv
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 20,505 ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿವೆ. ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಹಾಗೇ ಸೋಂಕಿತರ ಪ್ರಮಾಣವು ಶೇ 12.55 ರಷ್ಟಿದೆ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಏರುತ್ತಿದ್ದು, ಬುಧವಾರ ಒಂದೇ ದಿನ 81 ಜನರು ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣವು ಶೇ 0.39ರಷ್ಟು ಏರಿಕೆಯಾಗಿದೆ. ಕೊರೊನಾದಿಂದ ಸಾಗೀಡಾದವರ ಒಟ್ಟು ಸಂಖ್ಯೆ 39,137 ಜನರು. ಅಲ್ಲದೇ ಕಳೆದ 24 ಗಂಟೆಯಲ್ಲಿ 1.63 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 40,903 ಜನ ಚೇತರಿಸಿಕೊಂಡಿದ್ದಾರೆ ಈವರೆಗೆ ರಾಜ್ಯದಲ್ಲಿ ಒಟ್ಟು 36.77ಲಕ್ಷ ಜನರು ಚೇತರಿಸಿಕೊಂಡಿದ್ದು. ಸಕ್ರೀಯ ಪ್ರಕರಣಗಳ ಸಂಖ್ಯೆ ಶೇ 1.77 ರಷ್ಟು ಇಳಿಕೆಯಾಗಿದೆ. ಬೆಂಗಳೂರು ಒಂದರಲ್ಲೇ 96 ಸಾವಿರ ಸಕ್ರೀಯ ಪ್ರಕರಣಗಳಿವೆ ಎಂದು ತಿಳಿಸಿದೆ.
ಕೊರೊನಾ ಸೋಂಕಿನಿಂದ ಬೆಂಗಳೂರಿನಲ್ಲಿ 13 ಜನ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡದಲ್ಲಿ 10, ಮಂಡ್ಯ ಹಾಗೂ ಮೈಸೂರಿನಲ್ಲಿ ತಲಾ 6, ತುಮಕೂರು ಹಾಗೂ ಶಿವಮೊಗ್ಗಾದಲ್ಲಿ ತಲಾ 5, ಕೋಲಾರ, ಕಲಬುರಗಿ, ಬೀದರ್, ಹಾಗೂ ಬಳ್ಳಾರಿಯಲ್ಲಿ ತಲಾ 4, ಉತ್ತರ ಕನ್ನಡ ಹಾಗೂ ತಲಾ 3 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.









