ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು : ಸರ್ಕಾರದ ವಿರುದ್ಧ ಹೆಚ್ ಡಿಕೆ ಕಿಡಿ

Mahesh M Dhandu by Mahesh M Dhandu
February 3, 2022
in Newsbeat, Politics, ರಾಜಕೀಯ
H DKumaraswamy saaksha tv
Share on FacebookShare on TwitterShare on WhatsappShare on Telegram

9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು : ಸರ್ಕಾರದ ವಿರುದ್ಧ ಹೆಚ್ ಡಿಕೆ ಕಿಡಿ HDKumaraswamy spark against BJP government

ಬೆಂಗಳೂರು : 9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತಾಗಿದೆ. ಒಳ್ಳೆಯದು ಮಾಡಿ ಎಂದು ಅಲವತ್ತುಕೊಂಡರೆ, ಏಕಾಎಕಿ ಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಯಾವ ಸೀಮೆಯ ಆಡಳಿತ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸರಕಾರಕ್ಕೆ 6 ತಿಂಗಳು ತುಂಬಿದ ಮೇಲೆ ಸಾಧನೆಗಳ ಪುಸ್ತಕವೂ ಹೊರಬಂತು, ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ʼನಲ್ಲಿ ಅದ್ಧೂರಿ ಕಾರ್ಯಕ್ರಮವೂ ನಡೆಯಿತು. ಬಣ್ಣಬಣ್ಣದ ಜಾಹೀರಾತುಗಳ ಮೂಲಕ ಮಾಡದ ಕೆಲಸಗಳ ಬಗ್ಗೆ ಕೊಚ್ಚಿಕೊಂಡಿದ್ದೂ ಆಯಿತು. ಸ್ವ-ಗುಣಗಾನ ಇನ್ನೂ ನಿಂತಿಲ್ಲ.

9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತಾಗಿದೆ. ಒಳ್ಳೆಯದು ಮಾಡಿ ಎಂದು ಅಲವತ್ತುಕೊಂಡರೆ, ಏಕಾಎಕಿ ಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಯಾವ ಸೀಮೆಯ ಆಡಳಿತ?

ಭಾರತವು ವಿಶ್ವಗುರು ಆಗಬೇಕು ಎನ್ನುತ್ತೀರಿ, ರಾಷ್ಟ್ರೀಯ ಶಿಕ್ಷಣದ ಮೂಲಕ ದೇಶವನ್ನು ಜ್ಞಾನಕಾಶಿ ಮಾಡುತ್ತೇವೆ ಎಂದು ಹೇಳುತ್ತೀರಿ, ಕರ್ನಾಟಕವು ಭಾರತದ ಶೈಕ್ಷಣಿಕ ರಾಜಧಾನಿ ಆಗಬೇಕು ಎನ್ನುತ್ತೀರಿ. 9,881 ಅತಿಥಿ ಉಪನ್ಯಾಸಕರನ್ನು ಕಿತ್ತೊಗೆಯುವ ಮೂಲಕ ಇದನ್ನು ಸಾಧನೆ ಮಾಡಲಾಗುತ್ತದೆಯೇ?

https://twitter.com/hd_kumaraswamy/status/1489203578833338370?s=20&t=eA7Q88el-rHy8MKCeEEQoA

ದೇಶ ಕಟ್ಟುವುದರಲ್ಲಿ ಶಿಕ್ಷಣವೇ ನಿರ್ಣಾಯಕ. ಆ ಶಿಕ್ಷಣ ವ್ಯವಸ್ಥೆಗೆ ಗುರುವೇ ನಾಯಕ. ಆದರೆ ಇಂದು ಕಲಿಸುವ ಗುರುವು ದಿಕ್ಕಿಲ್ಲದೆ ಬೀದಿಯಲ್ಲಿ ನಿಂತಿದ್ದಾನೆ. ಸರಕಾರ ಹೇಳುವುದು ಒಂದು, ಮಾಡುವುದು ಇನ್ನೊಂದು.

ಸರಕಾರಿ ಉನ್ನತ ಶಿಕ್ಷಣ ವ್ಯವಸ್ಥೆಯ ಕತ್ತು ಹಿಸುಕಿ, ವ್ಯವಸ್ಥಿತವಾಗಿ ಖಾಸಗಿ ವಲಯವನ್ನು ಬಲಪಡಿಸುವ, ಮಕ್ಕಳು-ಪೋಷಕರನ್ನು ಖಾಸಗಿಯವರ ಗುಲಾಮರನ್ನಾಗಿಸುವ ಹುನ್ನಾರ ಇದರ ಹಿಂದೆ ಇದೆಯಾ? ಎನ್ನುವ ಅನುಮಾನ ಬರುತ್ತಿದೆ.

ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ, ಹಿರಿತನ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗಾದರೆ, ಇವೆರಡೂ ಅರ್ಹತೆಗಳು ಇಲ್ಲದಿದ್ದವರನ್ನು ಇಷ್ಟು ದಿನ ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಂಡಿದ್ದು ಯಾಕೆ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇತ್ತಾ?

 

ಆರೇ ತಿಂಗಳಲ್ಲಿ ಅಭಿವೃದ್ಧಿ ಹರಿಕಾರರಾಗುವುದು ಎಂದರೆ ಇದೇನಾ? ಕನಿಷ್ಠ ಸರಕಾರ, ಗರಿಷ್ಠ ಆಡಳಿತ ಎಂದರೆ ನಿರುದ್ಯೋಗ ಸೃಷ್ಟಿಯಾ? ಸರಕಾರ ಇರುವುದು ಸಬೂಬು ಹೇಳುವುದಕ್ಕಲ್ಲ, ಕಾರಣ ಹೇಳಿ ಪಲಾಯನ ಮಾಡುವುದಕ್ಕಲ್ಲ. ನ್ಯಾಯ ಕೊಡುವ ಬಗ್ಗೆ ಕ್ರಮ ವಹಿಸಬೇಕು. ಕೂಡಲೇ ಬಸವರಾಜ ಬೊಮ್ಮಾಯಿ ಅವರು ಈ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags: #Saaksha TVBJPCongressH D KUMARASWAMY
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram