ಹಿಜಾಬ್, ಕೇಸರಿ ಶಾಲು ಪ್ರತಿಭಟನೆ | ಮಾರಕ ಆಯುಧಗಳೊಂದಿಗೆ ಐವರು Saaksha Tv
ಉಡುಪಿ: ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆಯ ವಿಚಾರದಲ್ಲಿ ಪ್ರತಿಭಟನೆ, ಚರ್ಚೆ ನಡೆಯುತ್ತಿರುವಾಗ ಐವರು ಮಾರಕಾಯುಧಗಳೊಂದಿಗೆ ಬಂದಿದ್ದರು ಎಂದು ಎಂದು ಹೇಳಲಾಗಿದೆ.
ಉಡಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳ ಪರವಾಗಿ 5-6 ವ್ಯಕ್ತಿಗಳು ಮಾರಕಾಯುಧಗಳೊಂದಿಗೆ ಆಗಮಿಸಿದ್ದರು. ಯಾವುದೇ ಸಮಯದಲ್ಲಾದರೂ, ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುವ ಮಾಹಿತಿ ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಎಂದು ಗುರುತಿಸಲಾಗಿದೆ. ಖಲೀಲ್, ರಿಜ್ವಾನ್ ಹಾಗೂ ಇಫ್ತೀಕರ್ ಎಂಬುವರ ಬಂಧನಕ್ಕೆ ಬಲೆ ಬೀಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಸದಾಶಿವ ಗವರೋಜಿ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನ ಬಂಧಿಸಿದ್ದಾರೆ.










