ಇಹಲೋಕ ತ್ಯಜಿಸಿದ ಲತಾ ಮಂಗೇಶ್ಕರ್ | ಪ್ರಧಾನಿ ಸಂತಾಪ
ಮಹಾರಾಷ್ಟ್ರ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ Lata Mangeshkar ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. Saaksha Tv
ಲತಾ ದೀದಿಯವರಿಂದ ನಾನು ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಅವರೊಂದಿಗೆ ನಾನು ನಡೆಸಿದ ಸಂವಾದಗಳು ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನದಿಂದ ನನಗೆ ಬಹಳಷ್ಟು ದುಃಖವಾಗಿದೆ. ಅವರ ಕುಟುಂಬದವರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಜನವರಿ 9ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ನ್ನು ತೆಗೆಯಲಾಗಿತ್ತು.
ಆದರೆ ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.









