ಭಾರತ ರತ್ನ ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರು lata-mangeshkar-passes-away saaksha tv
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್
ಭಾರತದ 36 ವಿವಿಧ ಭಾಷೆಗಳಲ್ಲಿ ಹಾಡಿದ್ದರು
ಸೆ.28 1929 ರಂದು ಲತಾ ಮಂಗೇಶ್ವರ್ ಜನನ
ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್
ಮಹಾರಾಷ್ಟ್ರ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಜನವರಿ 9ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ನ್ನು ತೆಗೆಯಲಾಗಿತ್ತು.
ಆದರೆ ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.
ಲತಾ ಮಂಗೇಶ್ಕರ್ (ಸೆಪ್ಟೆಂಬರ್ 28, 1929) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತದ 36 ಭಾಷೆಗಳಲ್ಲಿ ಹಾಡು ಹಾಡಿದ್ದಾರೆ. 1967ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ ಬೆಳಗಾಯಿತು” ಮತ್ತು “ಎಲ್ಲಾರೆ ಇರತೀರೋ ಎಂದಾರೆ ಬರತೀರೋ” ಹಾಡುಗಳನ್ನು ಹಾಡಿದ್ದಾರೆ.