ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದ ಜಗನ್ ಆಗ್ತಾರಾ ಡಿ.ಕೆ ಶಿವಕುಮಾರ್ : ರಾಜ್ಯಾದ್ಯಂತ ಪ್ರವಾಸಕ್ಕೆ ಟ್ರಬಲ್ ಶೂಟರ್ ಪ್ಲಾನ್…

admin by admin
May 20, 2020
in Newsbeat, ರಾಜಕೀಯ
DK Shivakumar Drug Mafia
Share on FacebookShare on TwitterShare on WhatsappShare on Telegram

ಬೆಂಗಳೂರು, ಮೇ 20 : ಡಿ.ಕೆ ಶಿವಕುಮಾರ್ ಅವರ ಪಾಲಿಗೆ ಕೊರೊನಾ ವೈರಸ್ ಶನಿಯಂತೆ ವಕ್ಕರಿಸಿದ್ದು, ಟ್ರಬಲ್ ಶೂಟರ್ ಗೆ ಪದೇ ಪದೇ ಟ್ರಬಲ್ ನೀಡುತ್ತಿದೆ. ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಸಾಂಕ್ರಾಮಿಕ ಹೆಮ್ಮಾರಿ ಕೊರೊನಾ ಅಡ್ಡಗಾಲು ಹಾಕುತ್ತಲೇ ಇದೆ. ಹೀಗಾಗಿ ಮೇ 31ರಂದು ಫಿಕ್ಸ್ ಆಗಿದ್ದ ಪದಗ್ರಹಣ ಸಮಾರಂಭವನ್ನು ಮುಂದೂಡಿರುವ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೋವಿಡ್-19 ಬಿಕ್ಕಟ್ಟನ್ನು ಬಳಸಿಕೊಂಡು ಜನರಿಗೆ ಹತ್ತಿರವಾಗಲು ಮುಂದಾಗಿದ್ದಾರೆ.

ರಾಜ್ಯಾದ್ಯಂತ ಡಿಕೆ ಸಾಹೇಬ ಪ್ರವಾಸ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಯಶಸ್ಸಿನ ಎಳೆಯನ್ನು ತೆಗೆದುಕೊಂಡು ಕೊರೊನಾ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಹತ್ತಿರವಾಗಲು ಡಿ ಕೆ ಶಿವಕುಮಾರ್ ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ಅವರು ತಮ್ಮ ಪ್ರವಾಸದ ಬಗ್ಗೆ ಉಪನಿಷತ್ ಉದಾಹರಣೆ ನೀಡಿ ವಿವರಿಸಿದರು.
ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪ್ರವಾಸ ಮಾಡುತ್ತೇನೆ. ಇದು ಪಕ್ಷದ ಕಾರ್ಯಕ್ರಮವಲ್ಲ. ಸಾಯುವ ಮೊದಲು ಏನಾದರೊಂದು ಒಳ್ಳೆ ಕೆಲಸ ಮಾಡು ಎಂದು ಉಪನಿಷತ್ ನಲ್ಲಿ ಹೇಳಲಾಗಿದೆ, ಹೀಗಾಗಿ ಈ ಕೊರೊನಾ ಸಮಯದಲ್ಲಿ ಕಷ್ಟಕ್ಕೊಳಗಾಗಿರುವ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ. ಅವರ ಸಮಸ್ಯೆಗೆ ಧ್ವನಿಯಾಗಿ ನಿಲ್ಲಲಿದ್ದೇನೆ. ಎಲ್ಲಾ ಜಾತಿ, ಧರ್ಮ, ಸಮುದಾಯ, ವರ್ಗಗಳ ಜನರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸುತ್ತೇನೆ ಎಂದು ಹುಮ್ಮಸ್ಸಿನಿಂದ ಹೇಳಿದ್ದಾರೆ ಡಿಕೆಶಿ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

ಆಂಧ್ರ ಸಿಎಂ ಜಗನ್ ಮಾರ್ಗದಲ್ಲಿ ಡಿಕೆಶಿ : ಯಾಕೆ ಗೊತ್ತಾ ?
ಕರ್ನಾಟಕದಲ್ಲಿ ಪ್ರಬಲ ಮುಖಂಡನಾಗಿ ಹೊರಹೊಮ್ಮಲು ಹವಣಿಸುತ್ತಿರುವ ಕನಕಪುರ ಬಂಡೆ ಮುಂದಿನ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಶತಾಯಗತಾಯ ಕೇಸರಿಪಡೆಗೆ ಡಿಚ್ಚಿ ಕೊಟ್ಟು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಲು ಟ್ರಬಲ್ ಶೂಟರ್ ಪಣತೊಟ್ಟಿದ್ದಾರೆ. ಹೀಗಾಗಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯಂತೆ ರಾಜ್ಯಾದ್ಯಂತ ಪ್ರವಾಸ ಮಾಡಲು ಮುಂದಾಗಿದ್ದಾರೆ.

ಅಂದ್ಹಾಗೆ ಸದ್ಯ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬರಲು ಕಾರಣವಾಗಿಯದ್ದೇ ಅವರ “ಪ್ರಜಾ ಸಂಕಲ್ಪ ಯಾತ್ರಾ”. ಚುನಾವಣೆಗೂ ಮುನ್ನಾ ಅಂದಿನ ಆಡಳಿತ ರೂಢ ಟಿಡಿಪಿ ವಿರುದ್ಧ ಸಮರ ಸಾರಿದ್ದ ಜಗನ್ ಮೋಹನ್ ರೆಡ್ಡಿ ರಾಜ್ಯಾದ್ಯಂತ ಪಾದಯಾತ್ರೆ ಮಾಡಿದರು. ಜನರ ಬಳಿಯೇ ಹೋಗಿ ಅವರ ಕಷ್ಟಗಳನ್ನು ಕೇಳಿದರು. ಹೀಗೆ ಜಗನ್ ತಮ್ಮ ಪ್ರವಾಸದ ಮೂಲಕ ಜನರಿಗೆ ಹತ್ತಿರವಾಗಿ ಆಂಧ್ರದ ಮಾಸ್ ಲೀಡರ್ ಆಗಿ ಗುರುತಿಸಿಕೊಂಡು ಯಾರೂ ಊಹಿಸದ ರೀತಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಅಧಿಕಾರದ ಚಿಕ್ಕಾಣಿ ಹಿಡಿದರು.

ಇದೇ ಕಾರಣಕ್ಕಾಗಿ ರಾಜ್ಯ ಕಾಂಗ್ರೆಸ್ ಸಾರಥಿ ಡಿ.ಕೆ ಶಿವಕುಮಾರ್ ಅವರು ಜಗನ್ ಅವರ ಯಶಸ್ಸಿನ ಎಳೆ ತೆಗೆದುಕೊಂಡು ಕೊರೊನಾ ಸಂದರ್ಭದಲ್ಲಿ ಜನರಿಗೆ ಹತ್ತಿರವಾಗಲು ಹೊರಟಿದ್ದಾರೆ. ಮೂಲಗಳ ಪ್ರಕಾರ ಡಿಕೆಶಿ ತಮ್ಮ ಪ್ರವಾಸಕ್ಕೆ ಈಗಾಗಲೇ ನಕ್ಷೆ ರೆಡಿ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಕಾಂಗ್ರೆಸ್ ಕಟ್ಟಪ್ಪ ಡಿ.ಕೆ.ಶಿವಕುಮಾರ್, ಆಂಧ್ರ ಸಿಎಂ ಜಗನ್ ರಂತೆ ಪಾದಯಾತ್ರೆ ಮೂಲಕ ರಾಜ್ಯ ಪ್ರವಾಸ ಮಾಡುತ್ತಾರೋ.. ಅಥವಾ ಬೇರೆ ರೀತಿಯಲ್ಲಿ ರಾಜ್ಯ ಪ್ರವಾಸ ಮಾಡುತ್ತಾರೋ ಎಂಬುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.

Tags: DK Shivakumar
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram