UP Election – ಮೊದಲ ಹಂತದ ವಿಧಾನಸಭಾ ಚುನಾವಣೆ. 9 ಗಂಟೆಯ ವರೆಗೆ 7.95% ಮತದಾನ
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಏಳು ಹಂತದ ವಿಧಾನಸಭಾ ಚುನಾವಣೆಯಲ್ಲಿ, ಮೊದಲ ಹಂತದ ಮತದಾನ ಪ್ರಕ್ರಿಯೆ ಶುರುವಾಗಿದೆ. ಉತ್ತರ ಪ್ರದೇಶದ ಪಶ್ಚಿಮ ಭಾಗದ ಕಡೆಯಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಈ ಪ್ರಾಂತ್ಯದಲ್ಲಿ ‘ಜಾಟ್ ಸಮುದಾಯ ಪ್ರಾಬಲ್ಯ ವನ್ನ ಹೊಂದಿದೆ. 11 ಜಿಲ್ಲೆಗಳ 58 ಸ್ಥಾನಗಳಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ 623 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಸುಮಾರು 2.27 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಬೆಳಗ್ಗೆ 9 ಗಂಟೆಯವರೆಗೆ ಕೇವಲ ಶೇ.7.95ರಷ್ಟು ಮತದಾನವಾಗಿದೆ. ಈ ಮತದಾನ ಪ್ರಕ್ರಿಯೆ ಚುರುಕಾಗಿದ್ದು ಮತಗಟ್ಟೆಗಳಲ್ಲಿ ಮತದಾರರ ಉದ್ದನೆಯ ಸಾಲುಗಳು ಕಂಡುಬರುತ್ತಿವೆ. ಮತಗಟ್ಟೆಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮೂಲಕ ಮತದಾರರನ್ನ ಒಳಬಿಡಲಾಗುತ್ತಿದೆ. UP Election – Nearly 8% voter turnout by 9am in 58 seats of west UP
ಮೊದಲ ಹಂತದ ಚುನಾವಣೆಯ ಮತದಾನಕ್ಕೆ ಮುನ್ನ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತದಾರರಿಗೆ ಎಚ್ಚರಿಸಿದ್ದಾರೆ. “ತಪ್ಪು ಮಾಡಿದರೆ ರಾಜ್ಯವು ಕಾಶ್ಮೀರ, ಕೇರಳ ಮತ್ತು ಬಂಗಾಳವಾಗದಂತೆ” ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.








