ಕ್ರಿಕೆಟ್ ಬಾಲ್ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ Saaksha Tv
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನಡೆದಿದೆ.
ನಾಲ್ಕು ದಿನದ ಹಿಂದೆ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆದಿತ್ತು. ಈ ಪಂದ್ಯಾವಳಿಗೆ ತಂದಿರುವ ಬಾಲ್‌ಗೆ ಹಣ ನೀಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಕಲಬುರಗಿ- ಅಫಜಲಪುರ ಮುಖ್ಯ ರಸ್ತೆಯಲ್ಲಿ ಮಹಿಳೆಯರು ಸೇರಿದಂತೆ ಯುವಕರು ಹೊಡೆದಾಡಿಕೊಂಡಿದ್ದಾರೆ.
ಮಾರಾಮಾರಿಯಲ್ಲಿ ಹಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ದೇವಲ್ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








