ನಮ್ಮ ಸರ್ಕಾರ ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಿಂತಿದೆ: ಪ್ರಧಾನಿ ಮೋದಿ Saaksha Tv
ಉತ್ತಪ್ರದೇಶ: ನಮ್ಮ ಸರ್ಕಾರ ‘ಹರ್ ಮಜ್ಲೂಮ್’, ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಿಂತಿದೆ ಎಂದು ಉತ್ತಪ್ರದೇಶದ ಸಹರಾನ್ಪುರ ಚುನಾವಣಾ ಪ್ರಚಾರದಲ್ಲಿ ಹೇಳಿದರು.
ಆದರೆ ಜನರು ಮುಸ್ಲಿಂ ಸಹೋದರಿಯರು ತಮ್ಮ ಹಕ್ಕುಗಳನ್ನು ಪಡೆಯದಂತೆ ಅಡ್ಡಗಾಲು ಹಾಕಲು ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಆ ಜನರು ಮುಸ್ಲಿಂ ಸಹೋದರಿಯರನ್ನು ಮೋಸಗೊಳಿಸುತ್ತಿದ್ದಾರೆ ಮುಸ್ಲಿಂ ಸಹೋದರಿಯರ ಬದುಕನ್ನು ಮತ್ತಷ್ಟು ಹಿಂದಕ್ಕೆ ತಳ್ಳುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಅಲ್ಲದೇ ಉತ್ತರ ಪ್ರದೇಶವನ್ನು ಗಲಭೆಗಳಿಂದ ಮುಕ್ತಗೊಳಿಸಲಾಗಿದೆ. ಅಪರಾಧಿಗಳನ್ನು ಜೈಲಿಗೆ ಕಳುಹಿಸಿದ್ದೇವೆ. ಇದರಿಂದ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲು ವಿವಾದದ ಕಾವು ಸ್ವಲ್ವ ಮಟ್ಟಿಗೆ ತಣ್ಣಗಾಗಿದ್ದು, ಈ ವಿವಾದ ಸಧ್ಯ ಹೈಕೋರ್ಟ್ ನಲ್ಲಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಹಿಳೆಯ ಕುರಿತು ಭರವಸೆಯ ಮಾತುಗಳನ್ನಾಡಿದ್ದಾರೆ.